


ಮಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಕೆಲವೊಂದು ಕಾರಣಗಳಿಂದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರು ಅಸಹಾಯಕತೆ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ. ಆ ಪತ್ರದ ಹಿಂದಿರುವ ಭಾವನೆ ಮತ್ತು ಉದ್ದೇಶವನ್ನು ಅರ್ಥ ಮಾಡಿಕೊಳ್ಳಬೇಕು. ಪತ್ರದಲ್ಲಿರುವ ಒಂದೆರಡು ಶಬ್ದಗಳನ್ನು ಹಿಡಿದುಕೊಂಡು ಅಪಾರ್ಥ ಕಲ್ಪಿಸಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.





ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊನೆ ಗಳಿಗೆಯಲ್ಲಿ ಕಾರ್ಯಕ್ರಮದಲ್ಲಿ ಹಾಜರಾಗಲು ಸಾಧ್ಯವಾಗದ ಕಾರಣ ಪತ್ರ ಬರೆದಿದ್ದಾರೆ. ಹೀಗಾಗಿ ಬೇರೆಯವರನ್ನು ನೇಮಕ ಮಾಡಿಕೊಳ್ಳಲಾಗಿದೆ. ಅದನ್ನು ಬಿಟ್ಟು ಇದನ್ನೇ ದೊಡ್ಡದು ಮಾಡಿ ರಾಜಕೀಯ ಮಾಡುವುದು ಬೇಡ. ಜಮೀರ್ ಅವರ ದೇಶಪ್ರೇಮದ ಬಗ್ಗೆ ಯಾರೂ ಪ್ರಶ್ನಿಸಲು ಸಾಧ್ಯವಿಲ್ಲ ಎಂದರು.










