ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ್ ಶೆಟ್ಟಿ ನಿಧನ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿ ಸದಸ್ಯ, ಮಂಗಳೂರು ನಗರ ಬ್ಲಾಕ್ ವಕ್ತಾರ ಲಕ್ಷ್ಮಣ್ ಶೆಟ್ಟಿ (52) ಅವರು ಹೃದಯಾಘಾತದಿಂದ ಬುಧವಾರ ನಿಧನ ಹೊಂದಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರ ಸಂತಾಪ ಸೂಚಿಸಿದೆ.

ಲಕ್ಷ್ಮಣ್ ಶೆಟ್ಟಿ ಅವರ ಅಕಾಲಿಕ ನಿಧನದಿಂದ ಜಿಲ್ಲಾ ಕಾಂಗ್ರೆಸ್ ಆಘಾತಕ್ಕೊಳಗಾಗಿದೆ. ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದು, ಪಕ್ಷದ ಸಂಘಟನೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಎಲ್ಲ ವರ್ಗದ ಜನರೊಂದಿಗೆ ಆತ್ಮೀಯವಾಗಿ ಬೆರೆತು ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಶ್ರಮಿಸಿದ್ದರು. ಅವರ ಸರಳತೆ, ನಿಷ್ಠೆ ಹಾಗೂ ಪಕ್ಷದ ಮೇಲಿನ ಬದ್ಧತೆ ಸದಾ ಸ್ಮರಣೀಯ. ಅವರ ಅಗಲಿಕೆ ಜಿಲ್ಲಾ ಕಾಂಗ್ರೆಸ್‌ಗೆ ತುಂಬಲಾರದ ನಷ್ಟ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹಿಂ, ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಗಂಗಾಧರ್ ಗೌಡ, ಶಾಸಕರಾದ ಅಶೋಕ್ ಕುಮಾರ್ ರೈ, ಐವನ್ ಡಿಸೋಜ, ಪಿ.ವಿ.ಮೋಹನ್, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಶಕುಂತಲಾ ಶೆಟ್ಟಿ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎಸ್.ಮೊಹಮ್ಮದ್, ಜಿ.ಎ.ಬಾವ, ಮಿಥುನ್ ರೈ, ರಕ್ಷಿತ್ ಶಿವರಾಂ, ಇನಾಯತ್ ಅಲಿ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here