


ಮಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹಂಪನಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೂವಿನ ವ್ಯಾಪಾರಕ್ಕೆ ಬಂದ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಇದಕ್ಕೆ ವ್ಯಾಪಾರಿಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.





ತೆರವು ಕಾರ್ಯಾಚರಣೆ ವೇಳೆ ವ್ಯಾಪಾರಿಗಳು ಗುಂಪುಗೂಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಆದರೂ ಬಲವಂತವಾಗಿ ತೆರವು ಮಾಡಲಾಯಿತು.


ಫುಟ್‌ಪಾತ್‌ಗಳು ಸಾರ್ವಜನಿಕರ, ವಿಶೇಷವಾಗಿ ಪಾದಚಾರಿಗಳ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಮೀಸಲಾಗಿರುವುದರಿಂದ ಯಾವುದೇ ರೀತಿಯ ಅಕ್ರಮ ಒತ್ತುವರಿಯನ್ನು ಸಹಿಸಲಾಗುವುದಿಲ್ಲ. ಕಾರ್ಯಾಚರಣೆ ಸಂದರ್ಭ ಒತ್ತುವರಿ ಮಾಡಿಕೊಂಡಿದ್ದನ್ನು ತೆರವುಗೊಳಿಸಿ, ಸಾರ್ವಜನಿಕರಿಗೆ ಫುಟ್‌ಪಾತ್ ಬಳಕೆಗೆ ಅನುವು ಮಾಡಿಕೊಡಲಾಯಿತು. ಮುಂದಿನ ದಿನಗಳಲ್ಲಿಯೂ ಫುಟ್‌ಪಾತ್‌ಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ವ್ಯಾಪಾರ ನಡೆಸುವುದು ಕಂಡುಬಂದರೆ ಮುಲಾಜಿಲ್ಲದೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ಬೀದಿ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದರು.








