


ಮಂಗಳೂರು: ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಗೆ ಮೂರು ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ವಿಶೇಷ ಕೊಡುಗೆಯಾಗಿ ನೀಡಲಾಯಿತು.





ಅಧ್ಯಕ್ಷತೆ ವಹಿಸಿದ್ದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಎಂ.ಆರ್. ಮಾತನಾಡಿ, ಆಸ್ಪತ್ರೆಯ ರೋಗಿಗಳು, ವೈದ್ಯರು ಹಾಗೂ ಶುಶ್ರೂಷಕಿಯರಿಗೆ ಸಂಬಂಧಿಸಿದ ಯಾವುದೇ ಸರ್ಜಿಕಲ್ ಬಟ್ಟೆಗಳನ್ನು ಮತ್ತೆ ಸುಸ್ಥಿತಿಯಲ್ಲಿ ಉಪಯೋಗ ಮಾಡಲು ಈ ಹೊಲಿಗೆ ಯಂತ್ರ ಬಹಳಷ್ಟು ಉಪಕಾರಿಯಾಗಲಿವೆ ಎಂದು ಹೇಳಿದರು.


ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ಸೊಸೈಟಿ ಮುಖ್ಯಸ್ಥ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿದರು. ವೇದಿಕೆಯಲ್ಲಿ ರೆಡ್ ಕ್ರಾಸ್ ಸೆಕ್ರೆಟರಿ ಡಾ. ಸತೀಶ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಗುರುದತ್ತ್ , ಕೋ ಆರ್ಡಿನೇಟರ್ ಗಿರೀಶ್, ನಿವಾಸಿ ವೈದ್ಯಾಧಿಕಾರಿ ಡಾ.ಜಗದೀಶ್, ಹಿರಿಯ ತಜ್ಞ ಡಾ. ದಯಾನಂದ್, ನರ್ಸಿಂಗ್ ಸೂಪರಿಂಟೆಂಡೆಂಟ್ ಗೀತಾ ಹಾಗೂ ಮಲ್ಲಿಕಾ, ಶುಶ್ರೂಷಾಧಿಕಾರಿ ಅಂಬಿಕಾ, ಜಯಲಕ್ಷ್ಮಿ ಇದ್ದರು. ಜ್ಯೋತಿ ಪ್ರಭಾ ಸ್ವಾಗತಿಸಿದರು.







