ಮಂಗಳೂರು- ಬೆಂಗಳೂರು ವಂದೇ ಭಾರತ್ ರೈಲಿನ ಪೂರ್ಣ ಪ್ರಮಾಣದ ಪ್ರಾಯೋಗಿಕ ಸಂಚಾರ ಯಶಸ್ವಿ

ಮಂಗಳೂರು: ಮಂಗಳೂರು- ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪೂರ್ಣ ಪ್ರಮಾಣದ ಪ್ರಾಯೋಗಿಕ ಸಂಚಾರ ಶನಿವಾರ ಯಶಸ್ವಿಯಾಗಿ ನೆರವೇರಿದೆ. ಈ ಮೂಲಕ ಕರಾವಳಿ ಭಾಗದ ಜನರ ಬಹುಸಮಯದ ಕನಸು ಈಡೇರುವ ಮಹತ್ವದ ಹಂತ ತಲುಪಿದೆ.

16 ಬೋಗಿಗಳ ಈ ರೈಲು ಬೆಂಗಳೂರಿನ ಯಶವಂತಪುರದಿಂದ ಹೊರಟಿದ್ದು, ಶನಿವಾರ ಮಧ್ಯಾಹ್ನ 2:25ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣ ತಲುಪಬೇಕಿತ್ತು. ಪಶ್ಚಿಮ ಘಟ್ಟದ ಮಾರ್ಗದಲ್ಲಿ ತಾಂತ್ರಿಕ ಪರಿಶೀಲನೆ ಕೈಗೊಂಡಿದ್ದರಿಂದ ಸಂಜೆ 4:30ರ ಸುಮಾರಿಗೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಆಗಮಿಸಿದೆ. ಸಂಜೆ 4:45ಕ್ಕೆ ವಂದೇ ಭಾರತ್ ರೈಲು ಮರಳಿ ಬೆಂಗಳೂರಿಗೆ ಪ್ರಾಯೋಗಿಕ ಪ್ರಯಾಣವನ್ನು ಆರಂಭಿಸಿತು.

ಈ ಹಿಂದೆ ಆ.12ರಿಂದ 20ರ ನಡುವೆ ಸಕಲೇಶಪುರ– ಸುಬ್ರಹ್ಮಣ್ಯ ನಡುವೆ 20 ಬೋಗಿಗಳ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ನಡೆಸಲಾಗಿತ್ತು.

ನೈರುತ್ಯ ರೈಲ್ವೆ ಅಧಿಕಾರಿಗಳು ಈ ಪ್ರಾಯೋಗಿಕ ಸಂಚಾರದ ಸಮಗ್ರ ವರದಿಯನ್ನು ಶೀಘ್ರ ರೈಲ್ವೆ ಮಂಡಳಿಗೆ ಸಲ್ಲಿಸಲಿದ್ದಾರೆ. ವರದಿ ಪರಿಶೀಲನೆ ಬಳಿಕ ವಾಣಿಜ್ಯ ಸಂಚಾರದ ಅಧಿಕೃತ ಆದೇಶ ಪ್ರಕಟವಾಗುವ ನಿರೀಕ್ಷೆಯಿದೆ.

LEAVE A REPLY

Please enter your comment!
Please enter your name here