ಮಂಗಳೂರು ನಗರ ಪೊಲೀಸ್ ನೂತನ ಡಿಸಿಪಿ ಸ್ಯಾಮ್ ವರ್ಗೀಸ್

ಮಂಗಳೂರು: ಮಂಗಳೂರು ನಗರ ಕಮಿಷನರೆಟ್ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಉಪ ಪೊಲೀಸ್ ಆಯುಕ್ತರಾಗಿ (ಡಿಸಿಪಿ) ಸ್ಯಾಮ್ ವರ್ಗೀಸ್ ಅವರನ್ನು ರಾಜ್ಯ ಸರ್ಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ.

ಬೆಂಗಳೂರಿನ ಅಪರಾಧ ತನಿಖಾ ಇಲಾಖೆಯ (ಸಿಐಡಿ) ಪೊಲೀಸ್ ಅಧೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸ್ಯಾಮ್ ವರ್ಗೀಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳೂರು ನಗರ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಹುದ್ದೆಗೆ ವರ್ಗಾಯಿಸಲಾಗಿದೆ.

ಈ ಹಿಂದೆ ಡಿಸಿಪಿಯಾಗಿದ್ದ ಮಿಥುನ್ ಎಚ್.ಎನ್. ಅವರನ್ನು ಇತ್ತೀಚೆಗೆ ಗದಗ ಜಿಲ್ಲಾ ಪೊಲೀಸ್ ಅಧೀಕ್ಷಕರನ್ನಾಗಿ ವರ್ಗಾಯಿಸಲಾಗಿತ್ತು. ತೆರವಾಗಿದ್ದ ಹುದ್ದೆಗೆ ಇದೀಗ ಸ್ಯಾಮ್ ವರ್ಗೀಸ್ ಅವರನ್ನು ನೇಮಿಸಲಾಗಿದೆ.

ಮೂಲತ: ಕೇರಳದ ಕೊಟ್ಟಾಯಂನ ಸ್ಯಾಮ್ ವರ್ಗಿಸ್ ಅವರು 2022ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ. ದಾವಣಗೆರೆ ಜಿಲ್ಲೆಯ ಚೆನ್ನಗರಿ ಉಪವಿಭಾಗದ ಎಎಸ್‌ಪಿಯಾಗಿ ವೃತ್ತಿ ಬದುಕು ಆರಂಭಿಸಿದ್ದ ಅವರು, ಬೆಂಗಳೂರಿನ ಅಪರಾಧ ತನಿಖಾ ಇಲಾಖೆಯ (ಸಿಐಡಿ) ಪೊಲೀಸ್ ಅಧೀಕ್ಷಕರಾಗಿದ್ದರು.

LEAVE A REPLY

Please enter your comment!
Please enter your name here