ಜಿಲ್ಲೆಯ ವಿವಿಧೆಡೆ ಗುತ್ತಿಗೆ ಆಧಾರಿತ 22 ಎಂಬಿಬಿಎಸ್ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿವಿಧ ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿ ಹುದ್ದೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಿರಿಯ ವೈದ್ಯಾಧಿಕಾರಿ ಹುದ್ದೆಗಳು ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹುದ್ದೆ ಸೇರಿದಂತೆ ಒಟ್ಟು 22 ಎಂಬಿಬಿಎಸ್ ವೈದ್ಯರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾಗುವ ವೈದ್ಯರಿಗೆ ಮಾಸಿಕ 60 ಸಾವಿರ ರು. ಗೌರವಧನ ನಿಗದಿಪಡಿಸಲಾಗಿದೆ.

ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಎಂಬಿಬಿಎಸ್ ಪದವಿ, ಹೌಸ್‌ಮೆನ್‌ಶಿಪ್ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಜಿಲ್ಲೆಯ ಶಿರ್ತಾಡಿ, ನಾರಾವಿ, ಈಶ್ವರಮಂಗಲ, ಮಾರ್ಣಿ, ಹತ್ತಡ್ಕ, ನಾವೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಲಾ ಒಂದು ಹುದ್ದೆ, ಸ.ಗಿ.ಆ.ಘ. ಸುಳ್ಯದಲ್ಲಿ ಒಂದು ಹುದ್ದೆ, ಉಪ್ಪಿನಂಗಡಿ, ಮೂಡುಬಿದಿರೆ, ಕಡಬದ ಸಮುದಾಯ ಆರೋಗ್ಯ ಕೇಂದ್ರಗಳಲ್ಲೂ ತಲಾ ಒಂದು ಹುದ್ದೆ, ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ 3 ಹುದ್ದೆ, ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ 2 ಹುದ್ದೆ, ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ 4 ಹುದ್ದೆ, ಪುತ್ತೂರಿನಸಾರ್ವಜನಿಕ ಆಸ್ಪತ್ರೆಯಲ್ಲಿ 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಅರ್ಜಿ ಸಲ್ಲಿಸಲು 11-09-2026ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ www.dkhfw.in ನಿಂದ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ಪ್ರಮಾಣಪತ್ರಗಳನ್ನು ಲಗತ್ತಿಸಿ 09-09-2026ರ ಮಧ್ಯಾಹ್ನ 4 ಗಂಟೆಯೊಳಗೆ ಮಂಗಳೂರಿನ ಡಿಎಚ್ಒ ಕಚೇರಿಗೆ ಸಲ್ಲಿಸಬೇಕು.

ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ 11-09-2026ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರಿನ ನೆಹರೂ ಮೈದಾನ ರಸ್ತೆಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2423672 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here