


ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ನಗರದ ಬಿಲ್ಲವ ಸಮುದಾಯ ಭವನದಲ್ಲಿ ಮಂಗಳವಾರ ಜ್ಞಾನ ವಿಕಾಸ ಸ್ವಸಹಾಯ ಸಂಘಗಳ ಸದಸ್ಯರೊಂದಿಗೆ ಬೆಂಗಳೂರು ಕ್ಷೇಮವನದ ಕಾರ್ಯ ನಿರ್ವಹಣಾಧಿಕಾರಿ ಶ್ರದ್ಧಾ ಅಮಿತ್ ಸಂವಾದ ನಡೆಸಿದರು.





ಈ ಸಂದರ್ಭ ಮಾತನಾಡಿದ ಶ್ರದ್ಧಾ ಅಮಿತ್, ಮಹಿಳೆಯರು ಕೇವಲ ಮನೆಗೆ ಸೀಮಿತರಾಗದೆ ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡಿ ತೋರಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಕೂಡ ಮಹಿಳೆಯರ ಸಬಲೀಕರಣಕ್ಕೆ ಬಹುದೊಡ್ಡ ಕೊಡುಗೆ ನೀಡಿದೆ. ಸಾವಿರಾರು ಮಂದಿ ಮಹಿಳೆಯರು ಇದರಿಂದ ಆರ್ಥಿಕವಾಗಿ ಏಳಿಗೆ ಹೊಂದಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶ್ರದ್ಧಾ ಅಮಿತ್ ಅವರನ್ನು ಸನ್ಮಾನಿಸಲಾಯಿತು. ಸಂಘದ ಸದಸ್ಯರನೇಕರು ಮಾತನಾಡಿ, ಯೋಜನೆಯಿಂದ ತಮಗೆ ದೊರೆತ ಸಹಕಾರವನ್ನು ಸ್ಮರಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ಮಂಗಳೂರು ಯೋಜನಾಧಿಕಾರಿ ಚಂದ್ರಶೇಖರ್, ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಜಿಲ್ಲಾ ನಿರ್ದೇಶಕ ದಿನೇಶ್ ಮತ್ತಿತರರು ಇದ್ದರು.










