


ಮಂಗಳೂರು: ಕಳೆದ 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್ಪಿಸಿ ವಾರಂಟ್ ಆರೋಪಿಯನ್ನು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಂಧಿಸಿದ್ದಾರೆ.


ಉಳ್ಳಾಲದ ಮುಕ್ಕಚೇರಿ, ಕಿಲೇರಿಯಾ ನಗರ ನಿವಾಸಿ ಅಶ್ಪಾಕ್ (34) ಬಂಧಿತ.





ಆರೋಪಿ ಅಶ್ಪಾಕ್ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 197/2017ರಲ್ಲಿ ಐಪಿಸಿ ಕಾಯ್ದೆಯ 143, 147, 341, 504, 323, 506, 307 ಹಾಗೂ 149 ರ ಅಡಿಯಲ್ಲಿ ಗಂಭೀರ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವು 2ನೇ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.
ಆದರೆ ಆರೋಪಿಯು ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆತನ ವಿರುದ್ಧ ಎಲ್ಪಿಸಿ ವಾರಂಟ್ ಜಾರಿಗೊಳಿಸಿತ್ತು.
ಕೊನೆಗೂ ಮಂಗಳವಾರ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.







