


ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಸಂತೋಷ್ ಕುಮಾರ್ ಶೆಟ್ಟಿ ಅವರು, ಸುರತ್ಕಲ್–ಚೇಳಾಯರು ವ್ಯಾಪ್ತಿಯ ಮುಡಾ ನಿವೇಶನಗಳ ಪ್ರಸ್ತುತ ಸ್ಥಿತಿಗತಿ, ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕರಿಗೆ ನಿವೇಶನ ಹಂಚಿಕೆ/ ಬಳಕೆಗೆ ಸಂಬಂಧಿಸಿದ ವಿಚಾರಗಳನ್ನು ಪರಿಶೀಲಿಸುವ ಉದ್ದೇಶದಿಂದ ಮೂಡ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಸ್ಥಳ ವೀಕ್ಷಣೆ ನಡೆಸಿದರು.





ಈ ಸಂದರ್ಭ ನಿವೇಶನಗಳ ಅಭಿವೃದ್ಧಿ, ಮೂಲಸೌಕರ್ಯ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.










