5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿ ಮಹಿಳೆ ಬಂಧನ

ಮಂಗಳೂರು: ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2019ರಲ್ಲಿ ಮನೆಯಿಂದ ಕಳ್ಳತನ ಮಾಡಿ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ದಸ್ತಗಿರಿ ವಾರಂಟ್ ಆರೋಪಿ ಮಹಿಳೆಯನ್ನು ಕಾವೂರು ಠಾಣೆ ಪೊಲೀಸರು ಜ್ಯೋತಿ ನಗರದಲ್ಲಿ ಬಂಧಿಸಿದ್ದಾರೆ.

ಆಕಾಶಭವನದ ಆನಂದನಗರ ನಿವಾಸಿ ಲತಾ ಮಾರಿಯಾ (44) ಬಂಧಿತೆ.

​ಪ್ರಕರಣದ ಹಿನ್ನೆಲೆ: ಆರೋಪಿ ಲತಾ ಮಾರಿಯಾ ಮೇಲೆ ಕಳ್ಳತನ ಕಳ್ಳತನದ ಪ್ರಕರಣ ಕಾವೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಈ ಕುರಿತು ಮಂಗಳೂರಿನ ಹಿರಿಯ ಸಿಜೆ & ಸಿ.ಜೆ.ಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಆದರೆ ಈಕೆ ಕಳೆದ 5 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯವು ಆಕೆಯ ವಿರುದ್ಧ ದಸ್ತಗಿರಿ ವಾರಂಟ್ ಹೊರಡಿಸಿತ್ತು.

ಇದೀಗ ಆರೋಪಿ ಮಹಿಳೆ ಜ್ಯೋತಿ ನಗರದಲ್ಲಿರುವ ಖಚಿತ ಮಾಹಿತಿಯ ಮೇರೆಗೆ ಕಾವೂರು ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಬುಧವಾರ ನ್ಯಾಯಾಲಯಕ್ಕೆ ಆಕೆಯನ್ನು ಹಾಜರುಪಡಿಸಲಾಗಿದೆ.

LEAVE A REPLY

Please enter your comment!
Please enter your name here