


ಮಂಗಳೂರು: ಮಂಗಳೂರಿನಲ್ಲಿ ಬೀಚ್ ಟೂರಿಸಂ ಮತ್ತು ನೈಟ್ಲೈಫ್ಗೆ ಅಗತ್ಯವಿರುವ ಎಲ್ಲ ಮೂಲಸೌಕರ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.





ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ತಣ್ಣೀರುಬಾವಿ ಬೀಚ್ ನಲ್ಲಿ ಗುರುವಾರ ಆಯೋಜಿಸಲಾಗಿದ್ದ ‘ಸ್ವಚ್ಛತೆಯೇ ಸೇವೆ-2026’ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಬೆಳೆಯಬೇಕಾದರೆ ದೇಶ-ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸುವುದು ಅಗತ್ಯ. ಈ ನಿಟ್ಟಿನಲ್ಲಿ ನೂತನ ಪ್ರವಾಸೋದ್ಯಮ ನೀತಿಯಡಿ ನೈಟ್ಲೈಫ್ ಪ್ರೋತ್ಸಾಹಿಸುವ ಅಂಶಗಳೂ ಸೇರಿವೆ ಎಂದರು.
ಮಂಗಳೂರಿನಲ್ಲಿ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕರಾವಳಿಯ ಪ್ರವಾಸೋದ್ಯಮ ಮತ್ತು ಮಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಮಹತ್ವದ ಪ್ರಸ್ತಾವನೆಗಳನ್ನು ಮಂಡಿಸಲಾಗುವುದು ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ಕರಾವಳಿ ತೀರದ ನೈರ್ಮಲ್ಯ ಕಾಪಾಡುವ ಕುರಿತು ಸ್ವಚ್ಛತಾ ಪ್ರತಿಜ್ಞಾವಿಧಿ ಬೋಧಿಸಿದರು.
ದೇಶದ್ರೋಹಿ ಆರೋಪಕ್ಕೆ ಆಕ್ಷೇಪ:
ಬಿಜೆಪಿ ನೀತಿಗಳನ್ನು ವಿರೋಧಿಸಿದವರನ್ನು ‘ದೇಶದ್ರೋಹಿ’ ಎಂದು ಕರೆಯುವುದು ಅವರ ಚಾಳಿ. ದೇಶದ ಹಿತಕ್ಕೆ ವಿರುದ್ಧವಾಗಿ ಕೆಲಸ ಮಾಡುವವರು ಮಾತ್ರ ದೇಶದ್ರೋಹಿಗಳೇ ಹೊರತು ಬಿಜೆಪಿಯನ್ನು ಪ್ರಶ್ನಿಸಿದವರೆಲ್ಲರೂ ಅಲ್ಲ ಎಂದರು.
ಮಂಗಳೂರು ಮಹಾನಗರ ಪಾಲಿಕೆ ಆಯುುಕ್ತ ರಾಹುಲ್ ರತ್ನಂ ಪಾಂಡೆ, ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಪೌರಕಾರ್ಮಿಕರು, ಸ್ವಯಂ ಸೇವಕರು ಇದ್ದರು.








