


ಮಂಗಳೂರು: ನಮಗೆ ರಾಜಕೀಯ ಮುಖ್ಯವಲ್ಲ, ಜನರ ಬದುಕು ಮುಖ್ಯ. ನಾವು ಜನರ ಭಾವನೆಗಳ ಮೇಲೆ ರಾಜಕಾರಣ ಮಾಡುವವರಲ್ಲ, ಬದುಕಿನ ಮೇಲೆ ರಾಜಕಾರಣ ಮಾಡುವವರು. ಹಾಗಾಗಿ ನಮ್ಮ ಸಂಪುಟ ಸಭೆಗೆ ಯಾರೂ ಗಾಬರಿಯಾಗಬೇಕಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.





ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಶುಕ್ರವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.


ಮಹಾತ್ಮಾ ಗಾಂಧೀಜಿ ಅವರು ಮಂಗಳೂರಿಗೆ ಭೇಟಿ ನೀಡಿದ್ದಾಗ ಉಳಿದುಕೊಂಡಿದ್ದ ಐತಿಹಾಸಿಕ ಮನೆಗೆ (ಕೊಡಿಯಾಲಬೈಲಿನ ಗಾಂಧಿ ಸ್ಮಾರಕ ಕಟ್ಟಡ) ಭೇಟಿ ನೀಡಿ ಉಪಹಾರ ಸೇವಿಸಿದ್ದಾಗಿ ತಿಳಿಸಿದ ಮುಖ್ಯಮಂತ್ರಿ, ಅಲ್ಲಿ ಮಂಗಳೂರು ಬನ್ಸ್, ದೋಸೆ ಸೇರಿದಂತೆ ಕರಾವಳಿಯ ವಿಶಿಷ್ಟ ತಿಂಡಿಗಳನ್ನು ಸವಿದಿದ್ದೇನೆ. ತುಂಬಾ ಸಂತೋಷವಾಯಿತು ಎಂದರು.
ಮುಂದಿನ ಕಾರ್ಯಕ್ರಮಗಳ ಕುರಿತು ಪ್ರತಿಕ್ರಿಯಿಸಿ, ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಎಲ್ಲೆಲ್ಲಿಗೆ ಕರೆದುಕೊಂಡು ಹೋಗುತ್ತಾರೋ ಅಲ್ಲೆಲ್ಲಾ ಭೇಟಿ ನೀಡುತ್ತೇನೆ ಎಂದು ತಿಳಿಸಿದರು.
ಜನರ ಭಾವನೆಗಳನ್ನು ಕೆರಳಿಸಿ ರಾಜಕೀಯ ಮಾಡುವುದು ನಮ್ಮ ನೀತಿಯಲ್ಲ. ಎಲ್ಲರ ಚಿಂತನೆ ಮತ್ತು ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಸಿಎಂ ಹೇಳಿದರು.







