ಪಾನ್ ಮಸಾಲ, ತಂಬಾಕು ನಿಷೇಧ ಹಾಗೂ ಅಡಿಕೆ ಬೆಳೆಗಾರರ ಹಿತರಕ್ಷಣೆ

ಮಂಗಳೂರು: ಪಾನ್ ಮಸಾಲದಲ್ಲಿ ನಿಕೋಟಿನ್, ತಂಬಾಕು ಹಾಗೂ ಗುಟ್ಕಾ ಮಿಶ್ರಣ ಮಾಡಿ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದರೆ ಶುದ್ಧ ಪಾನ್ ಮಸಾಲ ಪ್ರತ್ಯೇಕವಾಗಿ ಬಂದರೆ ಯಾವುದೇ ತೊಂದರೆ ಇಲ್ಲ. ಈ ಕ್ರಮದಿಂದ ಅಡಕೆ ಬೆಳೆಗಾರರಿಗೆ ಯಾವುದೇ ತೊಂದರೆಯಾಗದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2014ರಲ್ಲಿ ಗುಟ್ಕಾ ನಿಷೇಧಿಸಿದಾಗಲೂ ಅಡಕೆ ಬೆಲೆ ಇಳಿಕೆಯಾಗಲಿದೆ ಎಂದು ಅಪಪ್ರಚಾರ ಮಾಡಲಾಗಿತ್ತು. ಆದರೆ ಆ ಬಳಿಕ ಅಡಕೆ ಧಾರಣೆ ಜಾಸ್ತಿಯಾಯಿತೇ ವಿನಃ ಕಡಿಮೆಯಾಗಲಿಲ್ಲ. ಈಗಲೂ ಅಡಕೆ ಬೆಳೆಗಾರರಿಗೆ ಅಥವಾ ವ್ಯಾಪಾರಿಗಳಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಭರವಸೆ ವ್ಯಕ್ತಪಡಿಸಿದರು.

ಸಿಗರೆಟ್ ಲಾಬಿಗೆ ಸರ್ಕಾರ ಮಣಿದಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಉತ್ತಮ ಆರೋಗ್ಯದ ಉದ್ದೇಶದಿಂದ ತಂದಿರುವ ನಿರ್ಧಾರಗಳ ಮೇಲೆ ರಾಜಕೀಯ ಆರೋಪ ಮಾಡುವುದು ಸರಿಯಲ್ಲ. ಗುಟ್ಕಾ ಮತ್ತು ಪಾನ್ ಮಸಾಲ ಕಂಪೆನಿಗಳ ಲಾಬಿಗೆ ಮಣಿದು ಯಾರು ಸಂಚಲನ ಸೃಷ್ಟಿಸುತ್ತಿದ್ದಾರೆ ಎಂಬುದು ಜನರಿಗೆ ತಿಳಿದಿದೆ ಎಂದು ತಿರುಗೇಟು ನೀಡಿದರು.

LEAVE A REPLY

Please enter your comment!
Please enter your name here