ಬಿಜೆಪಿ ನಗರ ದಕ್ಷಿಣ ಮಂಡಲದಿಂದ ಆಟಿದ ಐಸಿರಿ, ಕೋಣಗಳಿಗೆ ಹಿಂಡಿ ಅವಲಕ್ಕಿ ನೀಡಿ ಚಾಲನೆ

ಮಂಗಳೂರು: ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ನಗರದ ಬೋಳೂರಿನ ಸುಲ್ತಾನ್ ಬತ್ತೇರಿ ಬಳಿಯ ಸ್ವಸ್ತಿಕ್ ರಿವರ್ ಫ್ರಂಟ್ ನಲ್ಲಿ “ಆಟಿದ ಐಸಿರ” ಕಾರ್ಯಕ್ರಮ ನಡೆಯಿತು. ಉಪಸ್ಥಿತರಿದ್ದ ಗಣ್ಯರು ಕಂಬಳದ ಕೋಣಗಳಿಗೆ ಹಿಂಡಿ ಅವಲಕ್ಕಿ ಸಮರ್ಪಿಸುವ ಮೂಲಕ ವಿಶೇಷ ರೀತಿಯಲ್ಲಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ದೇಶಕ್ಕೆ ಸ್ವಾತಂತ್ರ್ಯ ಬಂದು 80 ವರ್ಷಗಳಾಗಿವೆ. ಅಂದಿನ ಹೋರಾಟದಲ್ಲಿ ನಮ್ಮ ತುಳುನಾಡಿನ ಹಲವು ವೀರರು ಭಾಗಿಯಾಗಿದ್ದು, ಈ ಮಣ್ಣಿನಲ್ಲೇ ವೀರತ್ವದ ಗುಣವಿದೆ. ನಮ್ಮ ಹಿರಿಯರು ಯಾವುದೇ ಮೂಢನಂಬಿಕೆಗಳನ್ನು ಹುಟ್ಟು ಹಾಕಲಿಲ್ಲ. ಅವರ ಪ್ರತಿಯೊಂದು ನಂಬಿಕೆಯ ಹಿಂದೆಯೂ ವೈಜ್ಞಾನಿಕ ಹಿನ್ನೆಲೆ ಇರುವುದೇ ಈ ಸಂಸ್ಕೃತಿಯ ಶ್ರೇಷ್ಠತೆ ಎಂದರು.

ಕಾರ್ಯಕ್ರಮದಲ್ಲಿ ಕೋಳಿ ಅಂಕ, ತೆಂಗಿನ ಕಾಯಿ ಕಟ್ಟುವುದು ಮುಂತಾದ ಗ್ರಾಮೀಣ ಸೊಗಡಿನ ಕ್ರೀಡೆಗಳು ಇದ್ದರೆ, ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಮಂಡಲದ ಮಹಿಳಾ ಮೋರ್ಚಾದವರು ಬಿಜೆಪಿ ಪ್ರಮುಖರು, ಕಾರ್ಯಕರ್ತರು, ತುಳುನಾಡಿನ ಜನಪ್ರಿಯ ಗೀತೆಗಳಿಗೆ ಹೆಜ್ಜೆ ಹಾಕಿದರು. ಅಲ್ಲದೆ ಹುಲಿವೇಷ ನೃತ್ಯವು ಕಾರ್ಯಕ್ರಮಕ್ಕೆ ಇನ್ನಷ್ಟು ಮೆರುಗು ತುಂಬಿತು. ಮಧ್ಯಾಹ್ನದ ವೇಳೆಗೆ ತುಳುನಾಡಿನ ಆಹಾರ ಪದ್ಧತಿಯ 127 ಬಗೆಯ ತಿನಿಸುಗಳು ಆಟಿದ ಐಸಿರದ ಪ್ರಮುಖ ಆಕರ್ಷಣೆಯ ಕೇಂದ್ರವಾಗಿತ್ತು.

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, ಜಿಲ್ಲಾ ಕೋಶಾಧಿಕಾರಿ ಸಂಜಯ್ ಪ್ರಭು, ಮಂಡಲದ ಪ್ರಭಾರಿ ತಿಲಕ್ ರಾಜ್ ಕೃಷ್ಣಾಪುರ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ, ಮಂಡಲದ ಯುವ ಮೋರ್ಚಾ ಅಧ್ಯಕ್ಷ ಅಶ್ವಿತ್ ಕೊಟ್ಟಾರಿ, ಪ್ರಮುಖರಾದ ಸುಧೀರ್ ಶೆಟ್ಟಿ ಕಣ್ಣೂರು, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ರಾಜ್ ಗೋಪಾಲ್ ರೈ, ಗುರು ಚರಣ್, ನಾರಾಯಣ ಗಟ್ಟಿ, ನಿಕಟ ಪೂರ್ವ ಪಾಲಿಕೆ ಸದಸ್ಯರು, ಪಕ್ಷದ ವಿವಿಧ ಪದಾಧಿಕಾರಿಗಳು, ಪ್ರಮುಖರು ಇದ್ದರು.

LEAVE A REPLY

Please enter your comment!
Please enter your name here