ಮಂಗಳೂರಿನಲ್ಲಿ ಜಂಟಿ ನಿರ್ದೇಶಕರ ಕಚೇರಿ ಸ್ಥಾಪನೆಗೆ ಆಗ್ರಹ – ನಗರಾಭಿವೃದ್ಧಿ ಪ್ರಾಧಿಕಾರಗಳ ಒಕ್ಕೂಟದಿಂದ ಮನವಿ

 

ಮಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಒಕ್ಕೂಟದ ಪದಾಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಮಂಗಳೂರು ಸರ್ಕ್ಯೂಟ್ ಹೌಸ್‌ನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.

9/11 ಸಮಸ್ಯೆ, ಕನ್ವರ್ಷನ್, ವಿನ್ಯಾಸ ನಕ್ಷೆ ಅನುಮೋದನೆ, ಕಟ್ಟಡ ಪರವಾನಿಗೆ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕರಾವಳಿ ಜಿಲ್ಲೆಗಳಿಗೆ ಏಕರೂಪ ನಿಯಮಗಳನ್ನು ಪಾಲಿಸಲು ಪ್ರತ್ಯೇಕ ವಲಯ ನಿಯಮಾವಳಿ ರಚಿಸಬೇಕು ಎಂದು ಒತ್ತಾಯಿಸಿದರು.ಪ್ರಸ್ತುತ ಕರಾವಳಿ ಜಿಲ್ಲೆಗಳು ಮೈಸೂರು ವಿಭಾಗಕ್ಕೆ ಸೇರಿದ್ದು, ಮಂಜೂರಾತಿ ವಿಳಂಬವಾಗುತ್ತಿದೆ. ಮಂಗಳೂರಿನಲ್ಲಿ ಜಂಟಿ ನಿರ್ದೇಶಕರ ಕಚೇರಿ ಸ್ಥಾಪಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.

ನಿಯೋಗದಲ್ಲಿ ಒಕ್ಕೂಟದ ಸಂಚಾಲಕ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರ್, ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫ ಸುಳ್ಯ, ಮೂಡಬಿದ್ರಿ ನಗರ ಯೋಜನಾ ಪ್ರಾಧಿಕಾರದ ಸದಸ್ಯ ಶೇಖರ ಪೂಜಾರಿ, ಉಡುಪಿ ಪ್ರಾಧಿಕಾರದ ಸದಸ್ಯ ಗಿರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here