


ಮಂಗಳೂರು: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ಹಾಗೂ ವೈದ್ಯಕೀಯ ಶಾಸ್ತ್ರ ತಜ್ಞರ ಸಂಘದ ಜಂಟಿ ಆಶ್ರಯದಲ್ಲಿ ನಗರದ ಡಾ.ಎ.ವಿ ರಾವ್ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಯಿತು.





ಕೆ.ಎಸ್. ಹೆಗ್ಡೆ ವೈದ್ಯಕೀಯ ಕಾಲೇಜಿನ ಅರಿವಳಿಕೆ ಶಾಸ್ತ್ರ ಪ್ರಾಧ್ಯಾಪಕ ಡಾ. ಆನಂದ ಬಂಗೇರ, ಕೆಎಂಸಿ ವೈದ್ಯಕೀಯ ಕಾಲೇಜಿನ ಮೂತ್ರರೋಗ ಶಾಸ್ತ್ರ ಶಸ್ತ್ರಚಿಕಿತ್ಸಾ ಪ್ರಾಧ್ಯಾಪಕ ಡಾ. ರಂಜಿತ್ ಶೆಟ್ಟಿ, ಕೆಎಂಸಿ ವೈದ್ಯಕೀಯ ಕಾಲೇಜಿನ ರೋಗಲಕ್ಷಣ ಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ. ಶಾರದಾ ರೈ ಅವರು ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸಾಧನೆಯನ್ನು ಪರಿಗಣಿಸಿ ಶಿಕ್ಷಕರ ದಿನಾಚರಣೆಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.


ಐಎಎಸ್ ಅಧಿಕಾರಿ ಡಾ. ರಾಜೇಂದ್ರ ಕೆ.ವಿ. ಕಾರ್ಯಕ್ರಮ ಉದ್ಘಾಟಿಸಿದರು. ಕಾಂತಾರ ಚಲನಚಿತ್ರ ನಟಿ, ಶಾಸ್ತ್ರೀಯ ನೃತ್ಯ ಕಲಾವಿದೆ ಮಾನಸಿ ಸುಧೀರ್ ಮುಖ್ಯ ಅತಿಥಿಯಾಗಿದ್ದರು. ತೇಜಸ್ವಿನಿ ಆಸ್ಪತ್ರೆಯ ನಿರ್ದೇಶಕ ಡಾ. ಶಾಂತರಾಮ್ ಶೆಟ್ಟಿ ಮಾತನಾಡಿದರು. ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಸದಾನಂದ ಪೂಜಾರಿ ಸ್ವಾಗತಿಸಿದರು. ವೇದಿಕೆಯಲ್ಲಿ ಚುನಾಯಿತ ಅಧ್ಯಕ್ಷ ಡಾ. ಉಲ್ಲಾಸ್ ಶೆಟ್ಟಿ, ಕೋಶಾಧಿಕಾರಿ ಡಾ. ಜ್ಯೂಲಿಯನ್ ಸಲ್ಡಾನಾ, ವೈದ್ಯಕೀಯ ಶಾಸ್ತ್ರ ತಜ್ಞರ ಸಂಘದ ಅಧ್ಯಕ್ಷ ಡಾ. ಪ್ರಶಾಂತ್, ಕಾರ್ಯದರ್ಶಿ ಡಾ. ಸನ್ಮನ್ ಕೆ.ಎನ್, ಕೋಶಾಧಿಕಾರಿ ಡಾ. ಅನುರಾಗ್ ಜೆ. ಶೆಟ್ಟಿ ಇದ್ದರು. ಕಾರ್ಯದರ್ಶಿ ಡಾ. ಪ್ರಕಾಶ್ ಹರಿಶ್ಚಂದ್ರ ವಂದಿಸಿದರು. ಅಕ್ಷತಾ ನಿರೂಪಿಸಿದರು.








