ದ.ಕ. ಜಿಲ್ಲೆಯ 7 ಗ್ರಾಪಂಗಳಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ – ಕಡತಗಳ ಪರಿಶೀಲನೆ, ಹಲವು ಲೋಪದೋಷ ಪತ್ತೆ

ಮಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿಗಳ ನಿರ್ದೇಶನದ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ 7 ಗ್ರಾಮ ಪಂಚಾಯ್ತಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಿಢೀರ್ ದಾಳಿ ನಡೆಸಿ ಕಡತಗಳನ್ನು ಪರಿಶೀಲಿಸಿದ್ದಾರೆ.

ಮಂಗಳೂರು ತಾಲೂಕಿನ ಅಡ್ಯಾರ್‌, ಪೆರ್ಮುದೆ, ಬಂಟ್ವಾಳ ತಾಲೂಕಿನ ಮಾಣಿ, ಗೋಳ್ತಮಜಲು, ಪುದು, ಬೆಳ್ತಂಗಡಿ ತಾಲೂಕಿನ ಮಡಂತ್ಯಾರು, ಕುವೆಟ್ಟು ಗ್ರಾಮ ಪಂಚಾಯ್ತಿಗಳಲ್ಲಿ ಪರಿಶೀಲನೆ ನಡೆಸಲಾಯಿತು.

ಈ ಗ್ರಾಪಂಗಳಲ್ಲಿ ದಾಖಲೆಗಳನ್ನು ಸರಿಯಾಗಿ ನಿರ್ವಹಣೆ ಮಾಡದೆ ಇರುವುದು, ಸಾರ್ವಜನಿಕ ಸೇವೆಯಲ್ಲಿ ಲೋಪ, ಅಧಿಕಾರಿಗಳ ನಿರ್ಲಕ್ಷ್ಯ ಇತ್ಯಾದಿ ಹಲವು ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದೆ.

ಅಧಿಕಾರಿಗಳ ಪರಿಶೀಲನೆ ವೇಳೆ ಕೆಲವೊಂದು ಲೋಪದೋಷಗಳು ಕಂಡು ಬಂದಿದ್ದು, ಈ ಬಗ್ಗೆ ಸಮಗ್ರ ವರದಿಯನ್ನು ರಾಜ್ಯಕ್ಕೆ ಕಳುಹಿಸಿಕೊಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here