9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರಂಟ್ ಆರೋಪಿ ಪೊಲೀಸರ ಬಲೆಗೆ

​ಮಂಗಳೂರು: ಕಳೆದ 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರಂಟ್ ಆರೋಪಿಯನ್ನು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಂಧಿಸಿದ್ದಾರೆ.

​ಉಳ್ಳಾಲದ ಮುಕ್ಕಚೇರಿ, ಕಿಲೇರಿಯಾ ನಗರ ನಿವಾಸಿ ಅಶ್ಪಾಕ್ (34) ಬಂಧಿತ.

ಆರೋಪಿ ಅಶ್ಪಾಕ್ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 197/2017ರಲ್ಲಿ ಐಪಿಸಿ ಕಾಯ್ದೆಯ 143, 147, 341, 504, 323, 506, 307 ಹಾಗೂ 149 ರ ಅಡಿಯಲ್ಲಿ ಗಂಭೀರ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವು 2ನೇ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.

​ಆದರೆ ಆರೋಪಿಯು ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆತನ ವಿರುದ್ಧ ಎಲ್‌ಪಿಸಿ ವಾರಂಟ್ ಜಾರಿಗೊಳಿಸಿತ್ತು.

​ಕೊನೆಗೂ ಮಂಗಳವಾರ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.‌ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

LEAVE A REPLY

Please enter your comment!
Please enter your name here