


ಮಂಗಳೂರು: ನಗರದ ಮಂಕಿಸ್ಟ್ಯಾಂಡ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಾಜೇಂದ್ರ ಬಿ.(59) ಎಂಬವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ.





ರಾಜೇಂದ್ರ ಅವರು ಬಾಡಿಗೆ ಮನೆಯಲ್ಲಿ ಒಬ್ಬಂಟಿಗರಾಗಿದ್ದು, ಕಳೆದ 2-3 ದಿನಗಳಿಂದ ಮೊಬೈಲ್ ಫೋನ್ ರಿಸೀವ್ ಮಾಡುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಮಂಗಳವಾರ ಇವರ ಬಾಡಿಗೆ ಮನೆಗೆ ಬಂದು ನೋಡಿದಾಗ ಮನೆಯೊಳಗೆ ಮೃತದೇಹ ಪತ್ತೆಯಾಗಿತ್ತು. ಸಾವಿಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.


ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ.







