


ಮಂಗಳೂರು: ಶಿಕ್ಷಕರು ಪ್ರಾಮಾಣಿಕತೆ, ನಿಸ್ವಾರ್ಥ ಸೇವಾ ಮನೋಭಾವದಿಂದ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ಧಾರೆಯೆರೆದು, ಉತ್ತಮ ನಾಗರಿಕರನ್ನಾಗಿ ರೂಪಿಸುವ ಶ್ರೇಷ್ಠ ಜವಾಬ್ದಾರಿ ಹೊಂದಿದ್ದಾರೆ, ಅದೇ ರೀತಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವ ಅಗತ್ಯವಿದೆ ಎಂದು ನಗರದ ಕೆನರಾ ವರ್ಕ್ ಶಾಪ್ ಕೈಗಾರಿಕಾ ಸಂಸ್ಥೆಯ ಆಡಳಿತ ನಿರ್ದೇಶಕ ಪ್ರೇಮನಾಥ್ ಕುಡ್ವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.





ರೋಟರ್ಯಾಕ್ಟ್ ಮಂಗಳೂರು ಸಿಟಿ ಸಂಸ್ಥೆ ಆಶ್ರಯದಲ್ಲಿ ನಗರದಲ್ಲಿ ಜರುಗಿದ ಶಿಕ್ಷಕರ ದಿನಾಚರಣೆಯ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ರೋಟರಿ ಜಿಲ್ಲಾ 3181 ಮಾಜಿ ಗವರ್ನರ್ ಡಾ. ದೇವದಾಸ್ ರೈ ಮಾತನಾಡಿದರು. ಸಂತ ಅಲೋಶಿಯಸ್ ಪ.ಪೂ. ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಫ್ಲೋರಿನ್ ರೀಟಾ ಡಿಸೋಜ ಅವರಿಗೆ ‘ಆದರ್ಶ ಶಿಕ್ಷಕಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಂಸ್ಥೆಯ ಅಧ್ಯಕ್ಷ ರಕ್ಷಣ್ ಸ್ವಾಗತಿಸಿದರು. ಕಾರ್ಯದರ್ಶಿ ಮುಖೇಶ್ ವರದಿ ಮಂಡಿಸಿದರು. ಕೋಶಾಧಿಕಾರಿ ಪ್ರಾಥಿಕ್ ಶೆಟ್ಟಿ ವಂದಿಸಿದರು.










