ಮಂಗಳೂರು ಜೈಲು ಮೊಬೈಲ್ ಜಾಮರ್ ಸಮಸ್ಯೆ ಪರಿಹಾರಕ್ಕೆ ಸೆ.14ರ ಗಡುವು – ಇಲ್ಲದಿದ್ದರೆ ಸಚಿವ ಸಂಪುಟ ಸಭೆ ಸಂದರ್ಭ ಪ್ರತಿಭಟನೆ: ಮಂಗಳೂರು ವಕೀಲರ ಸಂಘ ಎಚ್ಚರಿಕೆ

ಮಂಗಳೂರು: ನಗರದ ಕೊಡಿಯಾಲ್‌ಬೈಲ್‌ನ ಜೈಲಿನಲ್ಲಿ ಮೊಬೈಲ್ ನೆಟ್‌ವರ್ಕ್ ಜಾಮರ್ ಅಳವಡಿಕೆಯಿಂದ ನ್ಯಾಯಾಲಯ ಕಲಾಪ ಹಾಗೂ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿದ್ದು, ಸೆ.14ರೊಳಗೆ ಸಮಸ್ಯೆ ಪರಿಹರಿಸಬೇಕು. ಇಲ್ಲದಿದ್ದರೆ ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ಸಂದರ್ಭ ಪ್ರತಿಭಟನೆ ನಡೆಸಲಾಗುವುದು ಎಂದು ಮಂಗಳೂರು ವಕೀಲರ ಸಂಘ ಎಚ್ಚರಿಕೆ ನೀಡಿದೆ.

ಮೊಬೈಲ್ ಜಾಮರ್ ನಿಂದ ಕಳೆದ ಎರಡು ವರ್ಷಗಳಿಂದ ಮಂಗಳೂರು ನ್ಯಾಯಾಲಯ, ಸುತ್ತಮುತ್ತಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಹೊಟೇಲ್‌ಗಳು, ವಸತಿ ವ್ಯವಸ್ಥೆಗಳು ಹಾಗೂ ವಿವಿಧ ವ್ಯಾಪಾರ- ವಾಣಿಜ್ಯ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಜೈಲಿನೊಳಗಿನ ಭದ್ರತಾ ಸಮಸ್ಯೆಯನ್ನು ಪರಿಹರಿಸುವ ಹೆಸರಿನಲ್ಲಿ ಜೈಲಿನ ಹೊರಗಿರುವ ಸಾಮಾನ್ಯ ನಾಗರಿಕರು, ನ್ಯಾಯಾಂಗ ವ್ಯವಸ್ಥೆ, ಶಿಕ್ಷಣ ಸಂಸ್ಥೆಗಳು ಹಾಗೂ ವ್ಯಾಪಾರಸ್ಥರು ತೊಂದರೆ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಬಾರದು. ಈ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು ಎಂದು ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಜಗದೀಶ ಶೇಣವ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here