ಮಂಗಳೂರಿನಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ವಿವಿಧೆಡೆ ಸ್ಥಳ ವೀಕ್ಷಣೆ ಮಾಡಿದ ಮುಡಾ ಅಧ್ಯಕ್ಷ

ಮಂಗಳೂರು: ಮಂಗಳೂರಿನಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವ ಉದ್ದೇಶದಿಂದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರು ಶನಿವಾರ ನಗರದ ವಿವಿಧ ಪ್ರದೇಶಗಳಲ್ಲಿ ಸ್ಥಳ ವೀಕ್ಷಣೆ ನಡೆಸಿದರು.

ಮಂಗಳೂರಿನಲ್ಲಿ ಬೃಹತ್ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ, ಕ್ರೀಡಾ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಹಾಗೂ ಕ್ರಿಕೆಟ್ ಆಟಗಾರರಿಗೆ ಉತ್ತಮ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಎಸೋಸಿಯೇಶನ್ ವಿನಂತಿಯ ಮೇರೆಗೆ ನಗರದ ತಣ್ಣೀರುಬಾವಿ, ಬೆಂಗ್ರೆ, ಬೋಂದೆಲ್, ಮುಳೂರು, ಕಂದಾವರ, ಕುಡುಪು ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಕ್ರೀಡಾಂಗಣ ನಿರ್ಮಾಣಕ್ಕೆ ಸೂಕ್ತ ಸ್ಥಳಗಳ ಪರಿಶೀಲನೆ ನಡೆಸಿದರು.

ಮಂಗಳೂರಿನಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣವಾಗುವುದರಿಂದ ಸ್ಥಳೀಯ ಕ್ರಿಕೆಟ್ ಆಟಗಾರರಿಗೆ ಹೆಚ್ಚಿನ ಅವಕಾಶಗಳು ದೊರೆಯುವ ಜತೆಗೆ ಕ್ರೀಡಾ ಕ್ಷೇತ್ರದ ಬೆಳವಣಿಗೆಗೂ ಉತ್ತೇಜನ ದೊರೆಯುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here